MSCHS Nirchal: MAHAJANA

MSCHS Nirchal: MAHAJANA


ವಿಶ್ವಪರಿಸರ ದಿನಾಚರಣೆ

Posted: 04 Jun 2015 11:43 PM PDT


"ವಾತಾವರಣದಲ್ಲಿ ಅಂಗಾರಾಮ್ಲ ಮತ್ತು ಇತರ ವಿಷಕಾರಿ ಅನಿಲಗಳ, ಮಾಲಿನ್ಯದ ಪ್ರಮಾಣ ಗಣನೀಯವಾಗಿ ಏರುತ್ತಿದೆ. ಭೂಮಾಲಿನ್ಯದಿಂದಾಗಿ ಆಮ್ಲ ಮಳೆಯಂತಹ ಅಪಾಯಕಾರಿ ಪರಿಸ್ಥಿತಿ ನಿರ್ವಣವಾಗುತ್ತಿದೆ. ವನ್ಯಜೀವಿಗಳ ಮೇಲೆ ನೇರ ಪರಿಣಾಮ ಬೀರುತ್ತಿದೆ. ಇದು ಜೀವಜಾಲದ ಭದ್ರತೆಗೆ ತೊಡಕಾಗಿ ಪರಿಣಮಿಸಿದೆ. ಆಹಾರದ ಉತ್ಪಾದನೆ ಸಸ್ಯಗಳಿಂದ ಮಾತ್ರ ಸಾಧ್ಯ. ಅಂತಹ ಸಸ್ಯಗಳಿಗೆ ಪರಿಸರವು ಮಾರಕವಾಗಿ ಪರಿಣಮಿಸುತ್ತಿರುವುದರಿಂದ ನಾವು ಪರಿಸರ ಸಂರಕ್ಷಣೆಯ ಕಡೆಗೆ ಹೆಚ್ಚಿನ ಗಮನ ನೀಡಬೇಕಾಗಿದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು, ತ್ಯಾಜ್ಯದ ಸಮರ್ಪಕ ವಿಲೇವಾರಿ, ತ್ಯಾಜ್ಯದ ಮರುಬಳಕೆ, ಮನೆಯ ಸುತ್ತ ಮುತ್ತ ಗಿಡ-ಮರ ಬೆಳೆಸುವುದು, ಸಾವಯವ ಕೃಷಿಗೆ ಉತ್ತೇಜನ, ರಾಸಾಯನಿಕಗಳ ಮಿತ ಬಳಕೆ, ನೈಸರ್ಗಿಕ ಮೂಲಗಳ ಸದ್ಬಳಕೆ, ತ್ಯಾಜ್ಯದ ಉತ್ಪಾದನೆಯನ್ನು ಆದಷ್ಟು ನಿಯಂತ್ರಣದಲ್ಲಿಡುವುದರಿಂದ ಸಾಕಷ್ಟು ಮಟ್ಟಿಗೆ ಭೂಮಾಲಿನ್ಯವನ್ನು ತಪ್ಪಿಸಬಹುದು. ಜೊತೆಗೆ ದೊರೆತ ಆಹಾರವನ್ನು ಯುಕ್ತಿಯಿಂದ ಉಪಯೋಗಿಸಬೇಕಾಗಿದೆ, ಮುಂದಿನ ತಲೆಮಾರಿನ ಜೀವಿಗಳಿಗಾಗಿ ಪರಿಸರವನ್ನು ಉಳಿಸಬೇಕಾಗಿದೆ" ಎಂದು ನಮ್ಮ ಶಾಲೆಯ ಮುಖ್ಯೋಪಾಧ್ಯಾಯ ಸಿ.ಎಚ್. ವೆಂಕಟರಾಜ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ ವಿಶ್ವಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಿ ಮಾತನಾಡುತ್ತಿದ್ದರು.
ಶಿಕ್ಷಕರಾದ ಕೆ.ವಿನೋದಿನಿ ಅಧ್ಯಕ್ಷತೆ ವಹಿಸಿದ್ದರು. ಇಕೋ ಕ್ಲಬ್ ಸಂಚಾಲಕ ಶಿವಪ್ರಕಾಶ್.ಎಂ.ಕೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯನಾರಾಯಣ. ಎಂ ವಂದಿಸಿದರು.

No comments:

Post a Comment

Previous Page Next Page Home