MSCHS Nirchal: MAHAJANA |
“ಕ್ರೀಡಾಕೂಟಗಳು ಶಾರೀರಿಕ ಬೆಳವಣಿಗೆಗೆ ಸಹಕಾರಿ": ಎನ್.ಎ.ನೆಲ್ಲಿಕುನ್ನು Posted: 19 Nov 2015 09:21 PM PST "ಶಾಲಾ ವಿದ್ಯಾರ್ಥಿಗಳಲ್ಲಿ ಮಾನಸಿಕ, ಶಾರೀರಿಕ ಬೆಳವಣಿಗೆಗೆ ದೈಹಿಕ ಶಿಕ್ಷಣ ಅಗತ್ಯ. ಎಳವೆಯಲ್ಲಿಯೇ ವಿವಿಧ ಕ್ರೀಡಾವಿಭಾಗಗಳಲ್ಲಿ ಸಾಧನೆಗಳನ್ನು ಪ್ರದರ್ಶಿಸುತ್ತಾ ವಿದ್ಯಾರ್ಥಿಗಳು ಬೆಳೆಯಬೇಕು. ನೀರ್ಚಾಲಿನ ಮಣ್ಣಿನಲ್ಲಿ ಇಂತಹ ಸರ್ವತೋಮುಖ ಬೆಳವಣಿಗೆಯನ್ನು ಪಡೆದ ವಿದ್ಯಾರ್ಥಿಗಳು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿದ್ದಾರೆ. ಅಂತಹ ಇನ್ನಷ್ಟು ಕ್ರೀಡಾಪಟುಗಳನ್ನು ಈ ಕ್ರೀಡಾಕೂಟವು ಲೋಕಕ್ಕೆ ಸಮರ್ಪಿಸಲಿ ಎಂದು ಕಾಸರಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ.ನೆಲ್ಲಿಕುನ್ನು ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಗಳಲ್ಲಿ ಆರಂಭವಾದ ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ಬ್ಲೋಕ್ ಪಂಚಾಯತು ಸದಸ್ಯರಾದ ಅವಿನಾಶ್ ರೈ. ವಿ, ಎ.ಎಸ್.ಅಹ್ಮದ್, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಶಂಕರ.ಡಿ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ.ಕೆ, ಕಾಸರಗೋಡು ಜಿಲ್ಲಾ ಸ್ಪೋರ್ಟ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಕೆ.ಎಂ.ಬಲ್ಲಾಳ್, ಕುಂಬಳೆ ಉಪಜಿಲ್ಲಾ ಕ್ರೀಡಾಕೂಟದ ಕಾರ್ಯದರ್ಶಿ ಎಂ.ಸೂರ್ಯನಾರಾಯಣ ಇವರು ಕ್ರೀಡಾಕೂಟಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಲೆಯ ಹಳೆ ವಿದ್ಯಾರ್ಥಿ ಕೆ.ಎನ್.ಕೃಷ್ಣ ಭಟ್ ಇವರನ್ನು ಮಹಾಜನ ವಿದ್ಯಾಸಂಸ್ಥೆಗಳ ಪರವಾಗಿ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಗೌರವಿಸಿದರು. ಶಾಲಾ ಮುಖ್ಯೋಪಾಧ್ಯಾಯ ವೆಂಕಟರಾಜ. ಸಿ.ಎಚ್ ಸ್ವಾಗತಿಸಿದರು. ಕಾರ್ಯಕ್ರಮ ಸಮಿತಿ ಸಂಚಾಲಕ ವಿಶ್ವನಾಥ ಭಟ್ ಧನ್ಯವಾದ ಸಮರ್ಪಿಸಿದರು. |
You are subscribed to email updates from Kumbla11039: MSCHSS Nirchal. To stop receiving these emails, you may unsubscribe now. | Email delivery powered by Google |
Google Inc., 1600 Amphitheatre Parkway, Mountain View, CA 94043, United States |
No comments:
Post a Comment