MSCHS Nirchal: MAHAJANA

MSCHS Nirchal: MAHAJANA


ನವೆಂಬರ್ 19 ರಿಂದ ಕುಂಬಳೆ ಉಪಜಿಲ್ಲಾ ಕ್ರೀಡಾಕೂಟ

Posted: 16 Nov 2015 12:15 AM PST


ಕುಂಬಳೆ ಉಪಜಿಲ್ಲಾ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವು ನವೆಂಬರ್ 19 ರಿಂದ 21 ರ ತನಕ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ನಡೆಯಲಿದೆ. 19.11.2015 ಗುರುವಾರ ಬೆಳಗ್ಗೆ 9 ಗಂಟೆಗೆ ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ.ಕೆ ಧ್ವಜಾರೋಹಣಗೈಯುವರು. ನೀರ್ಚಾಲು ಶಾಲೆಯ ಹಳೆ ವಿದ್ಯಾರ್ಥಿ ಮತ್ತು ಪ್ರಸ್ತುತ ಅಂತಾರಾಷ್ಟ್ರೀಯ ಕ್ರೀಡಾಪಟು ವಿಶ್ವ.ಸಿ.ಎಚ್. ಕ್ರೀಡಾ ಜ್ಯೋತಿಯನ್ನು ಬೆಳಗಿಸಲಿದ್ದಾರೆ.
20.11.2015 ಶುಕ್ರವಾರ ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಬೆಳಗ್ಗೆ 9 ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜರಗಲಿದೆ. ಈ ಸಂದರ್ಭದಲ್ಲಿ ಕಾಸರಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ.ನೆಲ್ಲಿಕುನ್ನು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾಸರಗೋಡು ಬ್ಲೋಕ್ ಪಂಚಾಯತು ಸದಸ್ಯರಾದ ಅವಿನಾಶ್ ರೈ. ವಿ, ಎ.ಎಸ್.ಅಹ್ಮದ್ ಮತ್ತು ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಶಂಕರ.ಡಿ ಇವರು ಕ್ರೀಡಾಕೂಟಕ್ಕೆ ಶುಭಹಾರೈಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಸ್ವಾಗತವನ್ನು ಶಾಲಾ ಮುಖ್ಯೋಪಾಧ್ಯಾಯ ವೆಂಕಟರಾಜ. ಸಿ.ಎಚ್ ಮತ್ತು ಧನ್ಯವಾದ ಸಮರ್ಪಣೆಯನ್ನು ಕಾರ್ಯಕ್ರಮ ಸಮಿತಿ ಸಂಚಾಲಕ ವಿಶ್ವನಾಥ ಭಟ್ ನಿರ್ವಹಿಸಲಿದ್ದಾರೆ.
21.11.2015 ಶನಿವಾರ ಅಪರಾಹ್ನ 4 ಗಂಟೆಗೆ ಜರಗಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷರು ವಹಿಸಲಿದ್ದಾರೆ. ಕಾಸರಗೋಡು ಜಿಲ್ಲಾ ಪಂಚಾಯತು ಸದಸ್ಯ ಅಡ್ವಕೇಟ್ ಕೆ.ಶ್ರೀಕಾಂತ್ ಬಹುಮಾನಗಳನ್ನು ವಿತರಿಸಲಿದ್ದಾರೆ. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯರಾದ ಪ್ರೇಮಾ, ಶ್ಯಾಮಪ್ರಸಾದ್ ಮಾನ್ಯ ಮತ್ತು ಕುಂಬಳೆ ಉಪಜಿಲ್ಲಾ ಮುಖ್ಯೋಪಾಧ್ಯಾಯರ ಸಂಘಟನೆಯ ವಿನೋದನ್.ಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಿದ್ದಾರೆ. ಸಮಾರೋಪ ಸಮಾರಂಭದ ಸ್ವಾಗತವನ್ನು ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೆ.ಕೈಲಾಸಮೂರ್ತಿ ಮತ್ತು ಧನ್ಯವಾದ ಸಮರ್ಪಣೆಯನ್ನು ಕುಂಬಳೆ ಉಪಜಿಲ್ಲಾ ಕ್ರೀಡಾಕೂಟದ ಕಾರ್ಯದರ್ಶಿ ಎಂ.ಸೂರ್ಯನಾರಾಯಣ ನಿರ್ವಹಿಸಲಿದ್ದಾರೆ.
Previous Page Next Page Home