ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವಕ್ಕೆ ಚಾಲನೆ Posted: 31 Oct 2017 02:00 AM PDT
ಗ್ರಾಮ್ಯ ವಾತಾವರಣದ ಪೆರಡಾಲದಿಂದ ಬೆಳೆಯುತ್ತಾ ಬಂದು ನೀರ್ಚಾಲಿಗೆ ಸೇರಿದ ನಮ್ಮ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಐದು ದಿನಗಳ ಕಾಲ ನಡೆಯಲಿರುವ 58ನೇ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವಕ್ಕೆ ನೀರ್ಚಾಲು ಶೃಂಗಾರದಿಂದ ಸಜ್ಜುಗೊಂಡಿದೆ. ಆಕರ್ಷಕ ಸ್ವಾಗತ ಕಮಾನು, ವಿವಿಧ ವೇದಿಕೆಗಳು, ಚಪ್ಪರ ಸ್ಪರ್ಧಾಳುಗಳಿಗೆ ಆತಿಥ್ಯ ನೀಡಲು ಸಜ್ಜುಗೊಂಡಿವೆ. ಅಕ್ಟೋಬರ್ 31ರಂದು ಬೆಳಗ್ಗೆ 10 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಶಂಕರ.ಡಿ, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೈಲಾಸಮೂರ್ತಿ, ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್.ಎಂ, ಸಂಘಟಕ ಸಮಿತಿಯ ಅಧ್ಯಕ್ಷ ಎಸ್.ನಾರಾಯಣ, ಕುಂಬಳೆ ಉಪಜಿಲ್ಲಾ ಹೆಡ್ ಮಾಸ್ಟರ್ಸ್ ಫೋರಂ ನ ಸಂಚಾಲಕ ವಿಷ್ಣುಪಾಲ.ಬಿ, ನಿವೃತ್ತ ಮುಖ್ಯೋಪಾಧ್ಯಾಯ ಕೆ.ಶಂಕರನಾರಾಯಣ ಶರ್ಮ, ನಿವೃತ್ತ ಉಪನ್ಯಾಸಕ ಪ್ರೊ|ಶ್ರೀನಾಥ್, ಕೃಷ್ಣ ಮಣಿಯಾಣಿ ಮೊಳೆಯಾರು, ಬಾಲಗೋಪಾಲ ಏಣಿಯರ್ಪು ಮತ್ತಿತರರು ಉಪಸ್ಥಿತರಿದ್ದರು. ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟರಾಜ ಸಿ.ಎಚ್. ಸ್ವಾಗತಿಸಿದರು. ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ವಂದಿಸಿದರು. |