MSCHS Nirchal: MAHAJANA

MSCHS Nirchal: MAHAJANA


ಸಂಸ್ಕೃತ ಕಥಾರಚನೆಯಲ್ಲಿ ರಾಜ್ಯ ಮಟ್ಟಕ್ಕೆ

Posted: 21 Nov 2018 09:53 PM PST


ಕುಟ್ಟಮತ್ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಕಾಸರಗೋಡು ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದ ಪ್ರೌಢಶಾಲಾ ವಿಭಾಗದ ಸಂಸ್ಕೃತ ಕಥಾರಚನೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಹತ್ತನೇ  ತರಗತಿ ವಿದ್ಯಾರ್ಥಿನಿ ಆಶಾ.ಕೆ ಭಾಗವಹಿಸಿ 'ಎ' ಗ್ರೇಡಿನೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಈಕೆ ಕಿಳಿಂಗಾರು ನಿವಾಸಿ ಪ್ರಕಾಶ ಭಟ್ ಮತ್ತು ಸವಿತಾ.ಕೆ ಇವರ ಪುತ್ರಿ. ಅಭಿನಂದನೆಗಳು...

ವೃತ್ತಿ ಪರಿಚಯ ಮೇಳ_ಬಹುಮಾನ

Posted: 21 Nov 2018 09:53 PM PST


ನಮ್ಮ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ಅಗಲ್ಪಾಡಿಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟ ಮತ್ತು ಚೆಮ್ನಾಡಿನಲ್ಲಿ ಜರಗಿದ ಜಿಲ್ಲಾ ಮಟ್ಟದ ವೃತ್ತಿ ಪರಿಚಯ, ವಿಜ್ಞಾನ ಮತ್ತು ಐ.ಟಿ ಮೇಳಗಳಲ್ಲಿ ಬಾಗವಹಿಸಿ ಬಹುಮಾನ ಪಡೆದಿದ್ದಾರೆ. ಇಲೆಕ್ಟ್ರಿಕಲ್ ವಯರಿಂಗ್ ವಿಭಾಗದಲ್ಲಿ ಒಂಬತ್ತನೇ ತರಗತಿಯ ಕೃಷ್ಣಪ್ರಸಾದ್ ಮತ್ತು ಬಲೆ ಹೆಣೆಯುವ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಪ್ರಶಾಂತ್.ವಿ ಇವರು 'ಎ' ಗ್ರೇಡ್ ಪಡೆದು ಕಣ್ಣೂರಿನಲ್ಲಿ ಜರಗಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಭಿನಂದನೆಗಳು...

ಶಾಲಾ ಕಲೋತ್ಸವ_ಚಾಂಪಿಯನ್

Posted: 21 Nov 2018 09:48 PM PST


ನಮ್ಮ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಸಂಸ್ಕೃತೋತ್ಸವದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಚಾಂಪಿಯನ್ ಪಟ್ಟ ಗಳಿಸಿದ್ದಾರೆ. ಅಭಿನಂದನೆಗಳು...
Previous Page Next Page Home